ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಮರು ಆಯ್ಕೆ, ಅಭಿನಂದನೆ

ಜಾಹೀರಾತು/Advertisment
ಜಾಹೀರಾತು/Advertisment

 ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಮರು ಆಯ್ಕೆ, ಅಭಿನಂದನೆ

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ, ಮುಂದಿನ ಅವಧಿಗೆ   ದಕ್ಷಿಣ ಕನ್ನಡ ಜಿಲ್ಲಾ   ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರು ಮರು ಆಯ್ಕೆಗೊಂಡಿದ್ದಾರೆ.

  ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿಯ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಛೇರಿಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಆಯ್ಕೆ ಮಾಡಲಾಯಿತು.

 ಪದಗ್ರಹಣ ಸಮಾರಂಭದಲ್ಲಿ ಭಾರತೀಯ ಜನತಾ ಪಾರ್ಟಿ, ಮುಲ್ಕಿ- ಮೂಡುಬಿದಿರೆ ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ಹರಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ಸುನಿಲ್ ಆಳ್ವ ಮತ್ತು ಪದಾಧಿಕಾರಿಗಳು ಭಾಗವಹಿಸಿ ನೂತನ ಜಿಲ್ಲಾಧ್ಯಕ್ಷರನ್ನು ಅಭಿನಂದಿಸಿದರು.

  ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರಕೋಷ್ಠಗಳ ಪ್ರಮುಖರು,ಶಕ್ತಿಕೇಂದ್ರ ಪ್ರಮುಖರು,ಬೂತ್ ಅಧ್ಯಕ್ಷರು, ಸದಸ್ಯರು ಮತ್ತಿತರರು ಈ ಸಂದಭ೯ದಲ್ಲಿದ್ದರು.

Post a Comment

0 Comments