ರಾಜ್ಯ ಸೀನಿಯರ್ ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್ ಚಾಂಪಿಯನ್

ಜಾಹೀರಾತು/Advertisment
ಜಾಹೀರಾತು/Advertisment

 ರಾಜ್ಯ ಸೀನಿಯರ್ ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್ ಚಾಂಪಿಯನ್ 

ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್‌ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್ ಪ್ರಶಸ್ತಿ ಪಡೆಯಿತು. 

ಅಂತಿಮ ಸುತ್ತಿನಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ತಂಡವನ್ನು 36- 34 ಹಾಗೂ 35-21 ನೇರ ಸೆಟ್ ಗಳಿಂದ ಸೋಲಿಸಿ ಜಯ ಗಳಿಸಿತು. 

ಟೂರ್ನಿಯ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಳ್ವಾಸ್‌ನ ಆಕಾಶ್ ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಜೊತೆಯಲ್ಲಿ ಆಳ್ವಾಸ್‌ನ ವಿನಯ್ ಬೆಸ್ಟ್ ಸೆಂಟರ್ ಪ್ಲೇಯರ್ ಪ್ರಶಸ್ತಿ ಗಳಿಸಿದರು. 

ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Post a Comment

0 Comments