ಸರ್ಕಾರ ಮಾಡಬೇಕಾದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾಡುತ್ತಿದೆ, ಹೀಗಾಗಿ ಕ್ಷೇತ್ರದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ-ಶಿವಪಾಡಿ ವೈಭವ ಕಾರ್ಯಕ್ರಮದಲ್ಲಿ ಸಂಸದ ಕೋಟ ಮಾತು

ಜಾಹೀರಾತು/Advertisment
ಜಾಹೀರಾತು/Advertisment

 ಸರ್ಕಾರ ಮಾಡಬೇಕಾದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಾಡುತ್ತಿದೆ, ಹೀಗಾಗಿ ಕ್ಷೇತ್ರದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ-ಶಿವಪಾಡಿ ವೈಭವ ಕಾರ್ಯಕ್ರಮದಲ್ಲಿ ಸಂಸದ ಕೋಟ ಮಾತು

ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯನಾದಾಗ ನಾನು ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೆ. ಆ ಸಂದರ್ಭದಲ್ಲಿ ಮಾಧ್ಯಮದವರು ಈ ಬಗ್ಗೆ ಪ್ರಶ್ನಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯ ಖಾವಂದರು ಒಂದು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಬಡ ಕುಟುಂಬದ ಸದಸ್ಯರನ್ನು ದುಶ್ಚಟದಿಂದ ದೂರ ಮಾಡುವ ಮಹತ್ತರ ಕೆಲಸ ಸೇರಿದಂತೆ ಅನೇಕ ಬಡವರ ಪರ ಕೆಲಸ ಮಾಡುವ ಕಾರಣಕ್ಕಾಗಿ ನಾನು ಕ್ಷೇತ್ರದ ಹೆಸರಿನಲ್ಲಿ ಪ್ರಮಾಣ ವಚನ ಮಾಡಿದ್ದೇನೆ ಎಂದು ಹೇಳಿದ್ದೆ. ಹೀಗಾಗಿ ಇಂತಹಾ ಅದ್ಭುತ ಯೋಜನೆಗಳ ರೂವಾರಿ ಪೂಜ್ಯ ವೀರೇಂದ್ರ ಹೆಗ್ಗಡೆಯವರಿಂದ ಈ ಶಿವಪಾಡಿ ವೈಭವ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಆಯೋಜಿಸಿದ ಶಿವಪಾಡಿ ವೈಭವ ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸಂಸದರು ಕಾರ್ಯಕ್ರಮದ ರೂವಾರಿ ಮಾಜಿ ಶಾಸಕ ಕೆ ರಘುಪತಿ ಭಟ್ ಹಾಗೂ ಮಹೇಶ್ ಠಾಕೂರ್ ರವರನ್ನು ಅಭಿನಂದಿಸಿದರು. 


ಈ ಕಾರ್ಯಕ್ರಮದ ಮೂಲಕ ಉಡುಪಿಯ ಹೆಸರು ಮತ್ತಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಸಾಧ್ಯವಾಗಲಿದೆ. ಹೀಗಾಗಿ ಎಲ್ಲರಿಗೂ ಅಭಿನಂದನೆಗಳು ಎಂದು ಸಂಸದರು ನುಡಿದರು.


ಕಾರ್ಯಕ್ರಮದಲ್ಲಿ ಮಾಹೆಯ ಸಹ ಕುಲಾಧಿಪತಿಗಳಾದ ಡಾ.ಹೆಚ್.ಬಳ್ಳಾಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

0 Comments