ದರೆಗುಡ್ಡೆ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಕೋಟ್ಯಾನ್ ಭೇಟಿ

ಜಾಹೀರಾತು/Advertisment
ಜಾಹೀರಾತು/Advertisment

 ದರೆಗುಡ್ಡೆ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಕೋಟ್ಯಾನ್ ಭೇಟಿ

ಮೂಡುಬಿದಿರೆ: ದರೆಗುಡ್ಡೆ ಪಣಪಿಲ ಗ್ರಾಮದ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಭೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಗತಿ ಕಾರ್ಯವನ್ನು ಪರಿಶೀಲನೆ ನಡೆಸಿದರು.

ದರೆಗುಡ್ಡೆಯಿಂದ ದೇವಸ್ಥಾನಕ್ಕೆ ಹೋಗುವ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು 50 ಲಕ್ಷ ರೂ. ಅನುದಾನ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.ಶಾಸಕರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಆಡಳಿತ ಮೊಕ್ತೇಸರರಾದ ವಿಮಲ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಬೇಲೊಟ್ಟು ಅಶೋಕ್ ಶೆಟ್ಟಿ, ಸದಸ್ಯರುಗಳು ಅಭಿವೃದ್ಧಿ ಸಮಿತಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಮುಖ್ಯ ಅರ್ಚಕರಾದ ನಾಗರಾಜ ಭಟ್ ಪ್ರಾರ್ಥನೆ ನೆರವೇರಿಸಿ, ಪ್ರಸಾದ ವಿತರಿಸಿದರು.

Post a Comment

0 Comments