*ರಾಜ್ಯಮಟ್ಟದ ಯುವಜನೋತ್ಸವ : ಎಸ್ ಎನ್ ಮೂಡುಬಿದಿರೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಾಧನೆ
ಮೂಡುಬಿದಿರೆ: ರಾಜ್ಯ ಎನ್.ಎಸ್.ಎಸ್ ಕೋಶ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರಕಾರದ ಅಡಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ 5 ದಿನಗಳವರೆಗೆ ನಡೆದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯನ್ನು ಪ್ರತಿನಿಧಿಸಿದ ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡುಬಿದಿರೆ ತಂಡದ 8 ಮಂದಿ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರತಿಯೊಂದು ಚಟುವಟಿಕೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಭಾಗವಹಿಸಿ ನಾಲ್ಕು ಸ್ಪರ್ಧೆಯಲ್ಲಿ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾರೆ.
ಚರ್ಚಾ ಸ್ಪರ್ಧೆ ( ಪ್ರಥಮ ), ಪಿಕ್ & ಸ್ಪೀಕ್ ( ಪ್ರಥಮ), ಜನಪದ ನೃತ್ಯ ವೈಯಕ್ತಿಕ ( ತೃತೀಯ ), ಕಿರು ಪ್ರಹಸನ ( ತೃತೀಯ ).
ರಾಜ್ಯದ ಸುಮಾರು 13 ವಿಶ್ವವಿದ್ಯಾನಿಲಯಗಳ 125ಕ್ಕೂ ಅಧಿಕ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪಾಲಿಟೆಕ್ನಿಕ್ ನ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
0 Comments