ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ
ಮೂಡುಬಿದಿರೆ: ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ಉಪಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಅವರ ವಿರುದ್ಧ ಭಾರತೀಯ ಜನತಾ ಪಾಟಿ೯ ದ. ಕ ಜಿಲ್ಲೆಯ ವತಿಯಿಂದ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಮಂಗಳವಾರ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಉಮಾನಾಥ್ ಎ.ಕೋಟ್ಯಾನ್,
ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ , ಹರೀಶ್ ಪೂಂಜಾ , ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು , ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮೂಡುಬಿದಿರೆ ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್, ಬಿಜೆಪಿ ಪ್ರಮುಖರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರುಗಳು, ಮೋರ್ಚಾದ ಅಧ್ಯಕ್ಷರು ಮತ್ತು ಸದಸ್ಯರು, ಪ್ರಕೋಷ್ಠದ ಸದಸ್ಯರುಗಳು ಮತ್ತು ಬಿಜೆಪಿ ಕಾರ್ಯಕರ್ತರು ಈ ಸಂದಭ೯ ಉಪಸ್ಥಿತರಿದ್ದರು.
0 Comments