ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಮೂಡುಬಿದಿರೆ: ಬೆಂಗಳೂರಿನ ಶಾಸಕರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಸದನದಿಂದ ಅನ್ಯಾಯವಾಗಿ ಅಮಾನತು ಮಾಡಿರುವುದರ ವಿರುದ್ಧ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಸರ್ವಾಧಿಕಾರಿ ಧೋರಣೆ ತೋರಿರುವುದಾಗಿ ಆರೋಪಿಸಿ ಬಿಜೆಪಿ ಶಾಸಕರು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರು ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಶಾಸಕರಾದ ವಿ. ಸುನಿಲ್ ಕುಮಾರ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಯಶ್‌ಪಾಲ್ ಸುವರ್ಣ, ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಬಿಜೆಪಿ ಶಾಸಕರು ಭಾಗವಹಿಸಿ ಪ್ರತಿಭಟಿಸಿದರು.

Post a Comment

0 Comments

Advertisement