ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮೂಡುಬಿದಿರೆ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕು ಆಡಳಿತದ ತಾಲೂಕು ಆಡಳಿತ ಸೌಧದಲ್ಲಿ 134ನೇ ಅಂಬೇಡ್ಕರ್ ಜಯಂತಿಯ ಆಚರಣೆಯನ್ನು ಆಚರಿಸಲಾಯಿತು.
ಶಾಸಕ ಉಮಾನಾಥ್ ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಚ೯ಗೈದು ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಸ್ವತಂತ್ರ ಭಾರತಕ್ಕೆ ಸಂವಿಧಾನದ ಅಗತ್ಯವಿತ್ತು.ಅದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿ ಸಂವಿಧಾನವನ್ನು ಬರೆಯಲಾಯಿತು.ಜಗತ್ತಿನಲ್ಲೇ ಅತ್ಯಂತ ಉತ್ತಮವಾದ ಸಂವಿಧಾನವಿದ್ದರೆ ಅದು ಅಂಬೇಡ್ಕರ್ ಅವರು ಬರೆದ ಭಾರತದ ಸಂವಿಧಾನ ಎಂದ ಅವರು ದೇಶಕ್ಕೆ ಅತ್ಯುತ್ತಮವಾದ ಸಂವಿಧಾನವನ್ನು ನೀಡಿದ ಅವರನ್ನು ನೆನೆಯುವುದು ನಮ್ಮ ಕತ೯ವ್ಯ ಎಂದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ, ತಾಲೂಕು ತಹಸೀಲ್ದಾರ್ ಶ್ರೀಧರ್ ಮುಂದಲಮನಿ, ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಈ ಸಂದಭ೯ದಲ್ಲಿದ್ದರು.
ಉಪ ತಹಸೀಲ್ದಾರ್ ರಾಮ ಸ್ವಾಗತಿಸಿ, ವಂದಿಸಿದರು.
0 Comments