ಮುಖ್ಯಮಂತ್ರಿ ಪದಕ ಸ್ವೀಕರಿಸಿದ ಮೂಡುಬಿದಿರೆಯ ಇನ್ಸ್ಪೆಕ್ಟರ್
ಮೂಡುಬಿದಿರೆ: ಪೊಲೀಸ್ ಇಲಾಖೆಯಲ್ಲಿನ ಯಶಸ್ವಿ ಸೇವೆಗಾಗಿ ನೀಡಲಾಗುವ ಮುಖ್ಯಮಂತ್ರಿ ಪದಕವನ್ನು ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಸ್ವೀಕರಿಸಿದ್ದಾರೆ.
ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುವ ಸಂದೇಶ್ ಪಿ.ಜಿ.ಅವರು ಪ್ರಸ್ತುತ ಮೂಡುಬಿದಿರೆಯ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0 Comments