ಅಳಿಯೂರು ಶಾಲೆಯಲ್ಲಿ ಅಗ್ನಿ ಅವಘಡ: ಕರ್ತವ್ಯ ಪ್ರಜ್ಞೆ ಮೆರೆದ ಅಡುಗೆ ಸಿಬ್ಬಂದಿ ಹಾಗೂ ಶಿಕ್ಷಕರು: ಶಾಲಾಭಿವೃದ್ಧಿ ಸಮಿತಿ ಸ್ಪಷ್ಟನೆ
ಸರಕಾರಿ ಪ್ರಾಥಮಿಕ ಶಾಲೆ ಅಳಿಯೂರು ಇಲ್ಲಿನ ಅಡುಗೆ ಅನಿಲ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆಯಿತು. ಬೆಳಿಗ್ಗೆ ಅಡುಗೆ ಸಿಬ್ಬಂದಿಗಳು ಅಡುಗೆ ತಯಾರಿಸಲು ಸಿದ್ಧರಾದಾಗ ಸಿಲಿಂಡರಿನಲ್ಲಿ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಸುರಕ್ಷತಾ ಪ್ರಜ್ಞೆ ಮೆರೆದ ಅಡುಗೆ ಸಿಬ್ಬಂದಿಗಳು ಗೋಣಿಗಳನ್ನು ನೀರಿನಲ್ಲಿ ಮುಳುಗಿಸಿ ಸಿಲಿಂಡರ್ ಮೇಲೆ ಹಾಕಿದ್ದು ಅನಾಹುತವನ್ನು ತಪ್ಪಿಸಿದ್ದಾರೆ. ಶಾಲಾ ಶಿಕ್ಷಕರು ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಗೊಳಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು.
ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಸ್ಥಳೀಯರು ಅಗ್ನಿಶಾಮಕ ದಳವನ್ನು ಕರೆಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಅಳಿಯೂರು ರವರು "ಸಣ್ಣ ಅವಘಡ ಆಗಿದೆ, ಯಾರಿಗೂ ಯಾವ ಅಪಾಯವೂ ಆಗಿಲ್ಲ. ಅಡುಗೆ ಸಿಬ್ಬಂದಿಗಳು ಮತ್ತು ಶಿಕ್ಷಕರ ಸಮಯ ಪ್ರಜ್ಞೆಯಿಂದ ಯಾವ ಸಮಸ್ಯೆಯೂ ಆಗಿಲ್ಲ, ಈ ಬಗ್ಗೆ ಗೊಂದಲ ಬೇಡ" ಎಂದು ಹೇಳಿದ್ದಾರೆ.
ಅಳಿಯೂರು ಪ್ರಾಥಮಿಕ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಮೂಡುಬಿದಿರೆ ತಾಲೂಕಿನಲ್ಲಿರುವ ಕೆಲವೇ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಒಂದಾಗಿದೆ. ಮತ್ತು ಇಲ್ಲಿ ಎಲ್‌ಕೆಜಿ&ಯುಕೆಜಿ ಕೂಡಾ ಲಭ್ಯವಿದೆ. ಸರ್ಕಾರಿ ಶಾಲೆಯಾದರೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಾಲೆ ಎಂಬ ಕೀರ್ತಿಗೆ ಪಾತ್ರವಾಗಿದೆ.
0 Comments