ಆದಿದ್ರಾವಿಡ ಸಮಾಜದಿಂದ ಅಂಬೇಡ್ಕರ್ ಜಯಂತಿ ಆಚರಣೆ
ಮೂಡುಬಿದಿರೆ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವ ಸಂಘ (ರಿ) ತಾಲೂಕು ಘಟಕ ಮೂಡುಬಿದಿರೆ ಇದರ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸಮಾಜ ಮಂದಿರ ಮಿನಿ ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಅವರು ದೀಪ ಪ್ರಜ್ವಲಿಸಿದರು. ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಮಾಜಿ ಗೌರವಾಧ್ಯಕ್ಷ ಶೀನಾ ಮಾಸ್ತಿಕಟ್ಟೆ ಅವರು ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಚ೯ಣೆಗೈ ದರು.
ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಪಾಳ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕರ್ನಾಟಕ ರಾಜ್ಯ ಆದಿ ದ್ರಾವಿಡ ಸೇವಾ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಆದಿದ್ರಾವಿಡ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ. ಆನಂದ್ ಕಾರ್ಲ, ಮೂಡುಬಿದಿರೆ ತಾಲೂಕಿನ ಉಪ ತಹಶೀಲ್ದಾರ್ ರಾಮು, ಮೂಡುಬಿದಿರೆಯ ಪೊಲೀಸ್ ಉಪ ನಿರೀಕ್ಷಕ ಕೃಷ್ಣಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
0 Comments