ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಜಾಹೀರಾತು/Advertisment
ಜಾಹೀರಾತು/Advertisment

 ದರೆಗುಡ್ಡೆ ಇಟಲ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ


ಮೂಡುಬಿದಿರೆ: ಶಿಲಾಮಯವಾಗಿ ಜೀರ್ಣೋದ್ಧಾರಗೊಂಡ ದರೆಗುಡ್ಡೆಯ ಇಟಲ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಸೋಮನಾಥೇಶ್ವರ, ಶ್ರೀ ಮಹಾಗಣಪತಿ, ಶ್ರೀ ಮಹಿಷ ಮರ್ಧಿನಿ ದೇವರಿಗೆ ಬ್ರಹ್ಮಕಲಶೋತ್ಸವವು ಶುಕ್ರವಾರ ನಡೆಯಿತು. ಮಧ್ಯಾಹ್ನ ಮಹಾಅನ್ನಸಂತರ್ಪಣೆ, ಕಾರ್ಕಳ ತೆಳ್ಳಾರು ಗುರುರಾಘವೇಂದ್ರ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, ಪಟ್ಲ ಸತೀಶ್ ಶೆಟ್ಟಿ, ಗಿರೀಶ್ ರೈ ಕಕ್ಕೆಪದವು, ಕಾವ್ಯಶ್ರೀ ಅಜೇರು ಬಳಗದಿಂದ ಯಕ್ಷ - ಗಾನ - ನಾಟ್ಯ ವೈಭವ ನಡೆಯಿತು. ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಬಿ. ವಿಮಲ್ ಕುಮಾರ್ ಶೆಟ್ಟಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಕೇಶ್ ಶೆಟ್ಟಿ, ಸಂಚಾಲಕ ಪ್ರಮೋದ್ ಆರಿಗ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments