ತಿಮ್ಮಪ್ಪ ಪೂಜಾರಿಗೆ ಕ್ಷೀರ ರತ್ನ ರಾಜ್ಯ ಪ್ರಶಸ್ತಿ
ಮೂಡುಬಿದಿರೆ: ಇರುವೈಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಮ್ಮಪ ಪೂಜಾರಿಯವರಿಗೆ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ `ಕ್ಷೀರ ರತ್ನ ರಾಜ್ಯ ಪ್ರಶಸ್ತಿ' ನೀಡಿ ಗೌರವಿಸಿದೆ.
ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆಯವರು ಪ್ರಶಸ್ತಿ ಪ್ರದಾನ ಮಾಡಿದರು.
ಸಂಘದ ರಾಜ್ಯಾಧ್ಯಕ್ಷ ಎಂ. ಪ್ರಕಾಶ್ ತಿಮ್ಮಲಾಪುರ, ರಾಜ್ಯ ಕಾರ್ಯಾಧ್ಯಕ್ಷ ಎಂ.ಬಸವರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಆನೆಗುಂದಿ ಮತ್ತಿತರರಿದ್ದರು.
0 Comments