ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ-ಮೂಲ್ಕಿ ಮೂಡುಬಿದಿರೆ ಮಂಡಲ ಸಜ್ಜು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 399 ಗ್ರಾಮ ಪಂಚಾಯಿತಿಗಳ ಮುಂದೆ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಮುಲ್ಕಿ ಮೂಡುಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿಯ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ತಿಳಿಸಿದ್ದಾರೆ.
ನಿವೇಶನಕ್ಕಾಗಿ ಏಕ ವಿನ್ಯಾಸದ ನಿಯಮ, ಬೆಲೆ ಏರಿಕೆ ಸೇರಿದಂತೆ ಹಲವಾರು ಜನಪ್ರಿಯ ಯೋಜನೆಗಳ ರದ್ದತಿಯ ವಿರುದ್ಧ ಉಭಯ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಸಭೆಯು ಮೂಲ್ಕಿ ಮೂಡಬಿದ್ರೆಯಲ್ಲಿ ಯಶಸ್ವಿಯಾಗಿ ನಡೆಯಲಿದೆ ಎಂದು ತಿಳಿಸಿದರು.
ದಿನಾಂಕ 23.06.2025 ಸೋಮವಾರ ಬೆಳಗ್ಗೆ 10 ರಿಂದ ಉಭಯ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಗ್ರಾಮ ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನಾ ಸಭೆಯನ್ನು ನಡೆಸಲು ಭಾರತೀಯ ಜನತಾ ಪಾರ್ಟಿ ನಿರ್ಧರಿಸಿದೆ.
0 Comments