ತನ್ನ ಕುಟುಂಬಕ್ಕೆ ಸೈಟು ಮಾಡಿಟ್ಟ ಸಿಎಂ ಸಿದ್ದರಾಮಯ್ಯ ಬಡವರಿಗೆ ಮನೆ ಕೊಡುತ್ತಿಲ್ಲ:ಸುನಿಲ್ ಪಣಪಿಲ ಆಕ್ರೋಶ-ನಾರಾವಿ ಗ್ರಾಮ ಪಂಚಾಯತಿ ಮುಂಭಾಗ ಬಿಜೆಪಿ ಪ್ರತಿಭಟನೆ

ಜಾಹೀರಾತು/Advertisment
ಜಾಹೀರಾತು/Advertisment

 ತನ್ನ ಕುಟುಂಬಕ್ಕೆ ಸೈಟು ಮಾಡಿಟ್ಟ ಸಿಎಂ ಸಿದ್ದರಾಮಯ್ಯ ಬಡವರಿಗೆ ಮನೆ ಕೊಡುತ್ತಿಲ್ಲ:ಸುನಿಲ್ ಪಣಪಿಲ ಆಕ್ರೋಶ-ನಾರಾವಿ ಗ್ರಾಮ ಪಂಚಾಯತಿ ಮುಂಭಾಗ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಯಾವೊಂದು ಯೋಜನೆಯೂ ಜನರಿಗೆ ತಲುಪುತ್ತಿಲ್ಲ. ತನಗೂ ತನ್ನ ಕುಟುಂಬಕ್ಕೂ ಹತ್ತಾರು ಸೈಟುಗಳನ್ನು ಮಾಡಿಟ್ಟ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡ ಜನರಿಗೆ ಮನೆಯನ್ನೂ ಕೊಡುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಮಾಧ್ಯಮ ಪ್ರಕೋಷ್ಟ ಸದಸ್ಯರಾದ ಸುನಿಲ್ ಪಣಪಿಲ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು ಆ ಪ್ರಯುಕ್ತ ಇಂದು ನಾರಾವಿ ಗ್ರಾಮ ಪಂಚಾಯತ್ ನ ಎದುರುಗಡೆ  ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಮತ್ತು ಕುತ್ಲೂರು ವತಿಯಿಂದ ಅಭಿವೃದ್ಧಿಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು.

 ಈ ಕಾರ್ಯಕ್ರಮದಲ್ಲಿ ಯುವ ವಾಗ್ಮಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಾಮಾಜಿಕ ಮಾಧ್ಯಮ ಪ್ರಕೋಷ್ಟ ಸದಸ್ಯರಾದ ಸುನಿಲ್ ಪಣಪಿಲರವರು ಭಾಗವಹಿಸಿ ತನ್ನ ದಿಕ್ಸೂಚಿ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿವರಿಸಿ ಜನ ವಿರೋಧಿ ನೀತಿಗಳನ್ನು ಖಂಡಿಸಿದರು. ನಂತರ ಜನ ಸಾಮಾನ್ಯರ ಜೀವನದ ಸ್ಥಿತಿ ಗತಿಗಳ ಮೇಲೆ ದುಷ್ಪರಿಣಾಮ ಬೀರುವ ಕಾಂಗ್ರೆಸ್ ಸರ್ಕಾರದ ಕಾರ್ಯ ಯೋಜನೆಗಳನ್ನು ಖಂಡಿಸಿ ಅಭಿವೃದ್ಧಿಪರ ಜನಪರ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ರಾಜ್ಯಪಾಲರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಅಧ್ಯಕ್ಷರುಗಳು ಮನವಿಯನ್ನು ನೀಡುವ ಮೂಲಕ ಪ್ರತಿಭಟನಾ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.


 ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಭಂಡಾರಿ,ನಾರಾವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ದಯಾನಂದ ಪೂಜಾರಿ, ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಶ್ರೀ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಸದಸ್ಯೆ,ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾ ಸದಸ್ಯೆ ಆಶಾಲತಾ, ನಾರಾವಿ ಮಹಾಶಕ್ತಿ ಕೇಂದ್ರ ತಂಡದ ಸದಸ್ಯರಾದ ವಸಂತ್ ಆಚಾರ್ಯ, ಕುತ್ಲೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಾಕರ ಬಡೆಕ್ಕಿಲ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮಂಡಲ ಜಾಲತಾಣ ಸದಸ್ಯ ಅಜಿತ್ ಕುತ್ಲೂರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರುಗಳು, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪಕ್ಷದ ಪ್ರಮುಖ ನಾಯಕರುಗಳು, ಸಂಘ ಪರಿವಾರದ ನಾಯಕರುಗಳು, ಕಾರ್ಯಕರ್ತ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.


Post a Comment

0 Comments