ಉಪನ್ಯಾಸಕರಿಂದ ವಿದ್ಯಾಥಿ೯ನಿಯ ಅತ್ಯಾಚಾರ : ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನೆ

ಜಾಹೀರಾತು/Advertisment
ಜಾಹೀರಾತು/Advertisment

 ಉಪನ್ಯಾಸಕರಿಂದ ವಿದ್ಯಾಥಿ೯ನಿಯ ಅತ್ಯಾಚಾರ : ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ  ಪ್ರತಿಭಟನೆ

ಮೂಡುಬಿದಿರೆ : ಕಾಲೇಜೊಂದರ ಉಪನ್ಯಾಸಕರೀವ೯ರು ಮತ್ತು ಅವರ ಸ್ನೇಹಿತ ಸೇರಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಥಿ೯ನಿಯೋವ೯ಳನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿರುವ ಪ್ರಕರಣವನ್ನು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಡುಬಿದಿರೆ ಇದರ ವತಿಯಿಂದ ಬುಧವಾರ ಮೂಡುಬಿದಿರೆ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. 


 ಮೂಡುಬಿದಿರೆ ತಾಲೂಕಿನ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ನರೇಂದ್ರ, ಸಂದೀಪ್ ಮತ್ತು ಅವರ ಸ್ನೇಹಿತ ಅನೂಪ್ ಬೆಂಗಳೂರಿನ ಮಾರತಹಳ್ಳಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಬಂಧಿತರಾಗಿದ್ದು

 ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ  ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಅವರಿಗೆ ಮನವಿ ಸಲ್ಲಿಸಿದರು.

 ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಅವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಚೌಕಟ್ಟಿನಲ್ಲಿರುವಂತೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು. ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಈ ಬಗ್ಗೆ ನೋಟೀಸ್ ನೀಡಲಾಗುವುದು ಎಂದರು.

ಎಬಿವಿಪಿ ಜಿಲ್ಲಾ ಸಂಚಾಲಕ ಶ್ರೀ ಜಿತ್, ಎಬಿವಿಪಿ ಮಂಗಳೂರು ಮಹಾನಗರದ ಕಾರ್ಯದರ್ಶಿ ಭುವನೇಶ್ ತೂಮಿನಾಡು, ಸಹಕಾರ್ಯದರ್ಶಿ ಶಶಾಂಕ್ , ಎಬಿವಿಪಿ ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Post a Comment

0 Comments