ಆ. 16ರಂದು ಮೂಡುಬಿದಿರೆಯಲ್ಲಿ ವಾಹನ ಸಂಚಾರ ಬದಲಾವಣೆ
ಮೂಡುಬಿದಿರೆ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಮೂಡುಬಿದಿರೆ ಪೇಟೆಯಲ್ಲಿ ಮೆರವಣಿಗೆ ಮತ್ತು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುವುದರಿಂದ ಶನಿವಾರ(ಆ. 16) ಮಧ್ಯಾಹ್ನ 2.00 ಗಂಟೆಯ ನಂತರ ಪೇಟೆಯಲ್ಲಿ ವಾಹನ ಸಂಚಾರವನ್ನು ಬದಲಾವಣೆ ಮಾಡಲಾಗಿದೆ.
ರಸ್ತೆಯಲ್ಲಿ ಮೆರವಣಿಗೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ಮುಗಿಯುವವರೆಗೂ ವಾಹನಗಳು ಮೂಡುಬಿದಿರೆ ನಗರಕ್ಕೆ ಬಾರದೇ ಹೊರ ವರ್ತುಲ (ಬೈಪಾಸ್) ಸಂಚರಿಸಿ ಸಾವ೯ಜನಿಕರು ಸಹಕರಿಸಬೇಕೆಂದು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
0 Comments