ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ೭೯ ನೇ ಸ್ವಾತ್ರಂತ್ರ್ಯೋತ್ಸವ ಆಚರಣೆ
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಡುಬಿದಿರೆ ತಾಲೂಕು ಇದರ ಆಶ್ರಯದಲ್ಲಿ ೭೯ ನೇ ವಷ೯ದ ಸ್ವಾತ್ರಂತ್ರ್ಯೊತ್ಸವವನ್ನು ತಾಲೂಕು ಆಡಳಿತ ಸೌಧದ ಆವರಣದಲ್ಲಿ ಆಚರಿಸಲಾಯಿತು.
ತಾಲೂಕು ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರು ಧ್ವಜವನ್ನರಳಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಶ್ರಮಿಸಿದವರನ್ನು ಹಾಗೂ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿವರನ್ನು ನೆನಪಿಸಿದರು.
ಶಾಸಕ ಕೋಟ್ಯಾನ್ ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ಸಮರ್ಪಿಸಿ, ಪಥಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿ ಮಾತನಾಡಿ
ತ್ರಿವಣ೯ ಧ್ವಜ ನಮ್ಮ ದೇಶದ ಗೌರವದ ಸಂಕೇತ. ಅನೇಕ ಮಹನೀಯರು ದೇಶಕ್ಕಾಗಿ ಬಲಿದಾನಗೈದು ಸ್ವಾತಂತ್ರ್ಯವನ್ನು ನೀಡಿದ್ದಾರೆ. ಅವರ ಬಲಿದಾನ ವ್ಯರ್ಥವಾಗದಂತೆ ದೇಶಕ್ಕಾಗಿ ಶ್ರಮಿಸೋಣ, ದೇಶಕ್ಕಾಗಿ ಬದುಕಿ ಯಶಸ್ಸಿನ ಪಥದಲ್ಲಿ ಸಾಗೋಣ ಎಂದರು.
ಸನ್ಮಾನ, ಗೌರವ : ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಮಿಲಿಟರಿಯ ನಿವೃತ್ತ ಅಧಿಕಾರಿಗಳನ್ನು ಗೌರವಿಸಲಾಯಿತು.
ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರುಗಳು,ಗ್ಯಾರಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, , ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಾಪ್ಪ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಕುಸುಮಾಧರ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಉಪಸ್ಥಿತರಿದ್ದರು.
ಉಪ ತಹಶೀಲ್ದಾರ್ ರಾಮ ಕಾಯ೯ಕ್ರಮ ನಿರೂಪಿಸಿ ವಂದಿಸಿದರು.
--------------=-==
ಪಥ ಸಂಚಲನ : ಪೊಲೀಸ್ ಉಪ ನಿರೀಕ್ಷಕಿ ಪ್ರತಿಭಾ ಅವರ ನೇತೃತ್ವದಲ್ಲಿ ಮೂಡುಬಿದಿರೆ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್-ಗೈಡ್ಸ್, ರೋರ‍್ಸ್-ರೇಂರ‍್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
-------=-------
0 Comments