ಜಿಲ್ಲಾ ಮಟ್ಟದ ಸ್ಕೇಟಿಂಗ್: ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟಷ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಪದಕ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಪ್ರಾರ್ಥನಾ ಎರಡು ಬೆಳ್ಳಿ ಪದಕ, ಸಮ್ಯಕ್ ಎರಡು ಬೆಳ್ಳಿ ಪದಕ ಹಾಗೂ ಯಶ್ಮಿತ್ ಸಿಆರ್ ಎರಡು ಕಂಚಿನ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವ ಪ್ರಸಾದ್ ಭಟ್, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
0 Comments