ಡಾ.ಮೋಹನ ಆಳ್ವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ
ಮೂಡುಬಿದಿರೆ: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನದಿಂದ ಕೊಡ ಮಾಡುವ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಆಯ್ಕೆಯಾಗಿದ್ದಾರೆ.
ಆ.23ರಂದು ಮಂಗಳೂರಿನ ಎ.ಜೆ.ಗ್ರಾಂಡ್ ಹೋಟೆಲ್ನಲ್ಲಿ ನಡೆಯುವ ಪ್ರತಿಷ್ಠಾನದ 29ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments