2000ನೇ ಮದ್ಯವಜ೯ನ ಶಿಬಿರ : ಆಳ್ವಾಸ್ ನಲ್ಲಿ ಪೂವ೯ಭಾವಿ ಸಭೆ
ಮೂಡುಬಿದಿರೆ : ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ 2000ನೇ ಮದ್ಯವಜ೯ನ ಶಿಬಿರದ ಪೂರ್ವಭಾವಿ ಸಭೆಯು ಸೋಮವಾರ ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಶ್ಚಂದ್ರ ಚೌಟ ಅಧ್ಯಕ್ಷತೆಯನ್ನು ವಹಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಅವರು ಮಾತನಾಡಿ ಕಾರ್ಯಕ್ರಮದ ರೂಪುರೇಶೆಗಳ ಬಗ್ಗೆ, ಖರ್ಚು ವೆಚ್ಚಗಳ ಬಗ್ಗೆ ದಿನಾಂಕದ ಬಗ್ಗೆ ಮಾಹಿತಿ ನೀಡಿ, 2000ನೇ ಮಧ್ಯ ವರ್ಜನ ಶಿಬಿರ ಆಳ್ವಾಸ್, ಪುನರ್ಜನ್ಮ ಕೇಂದ್ರ ದಲ್ಲಿ ನಡೆಯುವ ಬಗ್ಗೆ ತೀರ್ಮಾನಿಸಲಾಯಿತು.
ಶಿಬಿರದ ಅಧ್ಯಕ್ಷರಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ ಅವರನ್ನು ಆಯ್ಕೆ ಮಾಡಲಾಯಿತು.
ತಾಲೂಕು ಜನಜಾಗೃತಿ ಪದಾಧಿಕಾರಿಗಳು ಒಕ್ಕೂಟದ ಪದಾಧಿಕಾರಿಗಳು ನವ ಜೀವನ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಧನಂಜಯ್ ಸ್ವಾಗತಿಸಿದರು. ಮೇಲ್ವಿಚಾರಕರಾದ ಕೃಷ್ಣಪ್ಪ ಎಂ ಕಾರ್ಯಕ್ರಮ ನಿರೂಪಿಸಿದರು.ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ನಿತೀಶ್ ವಂದಿಸಿದರು.
0 Comments