ಪೋಸ್ಟ್ ಕಾಡ್೯ ನ್ಯೂಸ್ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ
ಮೂಡುಬಿದಿರೆ : ತನ್ನ ಫೇಸ್ ಬುಕ್ ಖಾತೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಫೋಟೋ ಬಳಸಿ ಕೋಮು ಪ್ರಚೋದನೆ ರೀತಿಯಲ್ಲಿ ಪೋಸ್ಟ್ ಹಾಕಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಫೋಟೋ ಬಳಸಿ ‘ ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ,ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸಿವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಗ್ಡೆ ಅವರು ಹಂಚಿಕೊಂಡಿದ್ದರು ಈ ಬಗ್ಗೆ ಮೂಡುಬಿದಿರೆ ಪಿ.ಎಸ್.ಐ ಕೃಷ್ಣಪ್ಪ ಅವರ ದೂರಿನಂತೆ ಮೂಡುಬಿದಿರೆ ಠಾಣೆಯಲ್ಲಿ ಸ್ವಯಂ ಪ್ರಕರಣ ದಾಖಲಾಗಿತ್ತು.
ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿರುವ ಮೂಡುಬಿದಿರೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



0 Comments