ಶ್ರೀ ಮಹಾವೀರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಮ್ಮಿಲನ

ಜಾಹೀರಾತು/Advertisment
ಜಾಹೀರಾತು/Advertisment

 ಶ್ರೀ ಮಹಾವೀರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಮ್ಮಿಲನ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ ಆಚರಣೆ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘದವತಿಯಿಂದ ಹಳೆವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಶನಿವಾರ ನಡೆಯಿತು. 

 


ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್ ಬಿ. ಅವರು ಮಾತನಾಡಿ ಕಾಲೇಜಿನ ಮುಂದಿನ ಯೋಜನೆಗಳನ್ನು ತಿಳಿಸುತ್ತಾ  “ಕಳೆದ ಅರವತ್ತು ವರ್ಷಗಳಲ್ಲಿ ಈ ಕಾಲೇಜಿನಲ್ಲಿ ಹಲವು ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ಎಲ್ಲರ ಸಹಕಾರದಿಂದ ವಜ್ರಮಹೋತ್ಸವವನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಬಹುದು” ಎಂದರು.


ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅವರು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಹಳೆ ವಿದ್ಯಾರ್ಥಿಗಳು ನಡೆಸುತ್ತಿರುವ ಕಾರ್ಯಕ್ರಮಗಳನ್ನು ಸ್ಮರಿಸುತ್ತಾ “ವಜ್ರಮಹೋತ್ಸವದ ಸವಿನೆನಪಿಗಾಗಿ ಹಾಸ್ಟೆಲ್ ಕಟ್ಟಡ ನಿರ್ಮಾಣ, ಹೊಸ ಕೋರ್ಸ್ ಪರಿಚಯ, ಮೂಲಸೌಕರ್ಯಗಳನ್ನು ಉತ್ತಮಗೊಳಿಸುವ ಚಿಂತನೆ ಇದೆ. ಈಗಾಗಲೇ ವಿದ್ಯಾರ್ಥಿಗಳಿಗಾಗಿ ಇರುವ ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆ, ವಿದ್ಯಾರ್ಥಿಗಳ ಶುಲ್ಕ ಭರಿಸಲು ವಿದ್ಯಾರ್ಥಿ ಸ್ಪಂದನೆ ಯೋಜನೆಗಳೊಂದಿಗೆ ಉದ್ಯೋಗ ಹೊಂದಲು ಅಗತ್ಯವಿರುವ ತರಬೇತಿಗಳೊಂದಿಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿಯೂ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಮೂಲ ಉದ್ದೇಶವಾಗಿದ್ದು, ಅದಕ್ಕೆ ಪೂರಕವಾದ ವ್ಯವಸ್ಥೆಗಳಾಗುತ್ತಿವೆ. ಹೆಚ್ಚಿನ ಸಂಖ್ಯೆಯ ಹಳೆವಿದ್ಯಾರ್ಥಿಗಳು ಸಹಕಾರ ನೀಡುವುದರೊಂದಿಗೆ ಸಕ್ರಿಯವಾಗಿ ಭಾಗವಹಿಸುವ ಮೂಲಕ ವಜ್ರಮಹೋತ್ಸವದ ಆಚರಣೆಯನ್ನು ಸ್ಮರಣೀಯಗೊಳಿಸುವಂತಾಗಲಿ” ಎಂದರು. 

ಹಳೆ ವಿದ್ಯಾರ್ಥಿಗಳು ವಜ್ರಮಹೋತ್ಸವವನ್ನು 

ಅರ್ಥಪೂರ್ಣವಾಗಿ ಆಚರಿಸುವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.   ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಪ್ರಗತಿಯ ದೃಷ್ಟಿಯಿಂದ ನಡೆಸಲಾಗುವ ಕಾರ್ಯಕ್ರಮಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಬೇಕು. ಇದರಿಂದ ಹಳೆವಿದ್ಯಾರ್ಥಿಗಳೊಂದಿಗಿನ ಕಾಲೇಜಿನ ಬಾಂಧವ್ಯ ಇನ್ನಷ್ಟು ವೃದ್ಧಿಯಾಗುತ್ತದೆ ಎಂಬ ಅಭಿಪ್ರಾಯ ಹಳೆವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. 


ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ ಕಾಲೇಜು ತನ್ನನ್ನು ಅತ್ಯುತ್ತಮ ವ್ಯಕ್ತಿಯನ್ನಾಗಿ ಬೆಳೆಸಿದ್ದನ್ನು ಸ್ಮರಿಸಿದರು.

ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದರು. ಪಿಯು ಕಾಲೇಜು ಪ್ರಾಂಶುಪಾಲೆ ಲೆ.ವಿಜಯಲಕ್ಷ್ಮೀ ಬಿ. ಉಪಸ್ಥಿತರಿದ್ದರು.  


 ಹಳೆ ವಿದ್ಯಾರ್ಥಿನಿ ಚಂದನಾ ಕೆ. ಎಸ್. ಕಾರ್ಯಕ್ರಮ ನಿರೂಪಿಸಿದರು.ನಿವೃತ್ತ ಪ್ರಾಂಶುಪಾಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಎಂ. ರಮೇಶ್ ಭಟ್ ಎಲ್ಲರನ್ನೂ ವಂದಿಸಿದರು.

Post a Comment

0 Comments