ಗೋವುಗಳ ಅಕ್ರಮ ಸಾಗಾಟ : ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಗೋವುಗಳ ಅಕ್ರಮ ಸಾಗಾಟ : ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಮೂಡುಬಿದಿರೆ:  ಹೊಸ್ಮಾರು-ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ  ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಗೋವುಗಳ ಅಕ್ರಮ ಸಾಗಾಟದ ಬಗ್ಗೆ ನ.15ರಂದು ಸಂಜೆ 5 ಗಂಟೆಗೆ  ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ  ಮನ್ಸೂರ್ ಅದ್ಯಪಾಡಿ ಮೊಹಮ್ಮದ್ ಅಶ್ಫಕ್ ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.


ಆರೋಪಿಗಳ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ 178/2025 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್.) ಕಲಂ 111, ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 11(1)(ಡಿ) ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದ ಕಲಂ 4, 5, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ಪ್ರಕರಣದಂತೆ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಬಂಧಿತ ಆರೋಪಿಗಳ ಪೈಕಿ ಮನ್ಸೂರ್ ಅದ್ಯಪಾಡಿ ಮೇಲೆ ಇದುವರೆಗೆ ವಿವಿಧ ಠಾಣೆಗಳಲ್ಲಿ ಒಟ್ಟು 29 ಪ್ರಕರಣಗಳು ದಾಖಲಾಗಿದ್ದು, ಇದು ಆತನ 30ನೇ ಪ್ರಕರಣವಾಗಿದೆ. ಆರೋಪಿ ಮೊಹಮ್ಮದ್ ಅಶ್ಫಕ್  ಮೇಲೆ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಪ್ರಕರಣ ದಾಖಲಾಗಿದ್ದು, ಇದು ಆತನ 2ನೇ ಪ್ರಕರಣವಾಗಿದೆ. ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ನ ವಿರುದ್ಧ ಇದು ಮೊದಲನೇ ಪ್ರಕರಣವಾಗಿರುತ್ತದೆ.ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Post a Comment

0 Comments