ಡಿ. 20ರಂದು ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ "ಸ್ಪೂತಿ೯ ರತ್ನ" ಪ್ರಶಸ್ತಿ ಪ್ರದಾನ
ಮೂಡುಬಿದಿರೆ : ತಾಲೂಕಿನ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಡಿ.20 ರಂದು ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ ಅವರಿಗೆ ‘ಸ್ಪೂರ್ತಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಸ್ಥಾಪಕ ಪ್ರಕಾಶ್ ಜೆ. ಶೆಟ್ಟಿಗಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳುವಾಯಿ ಪಂಚಾಯತ್ ಅಧ್ಯಕ್ಷ ಸುರೇಶ್ ಗೋಳಾರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಶಾಸಕ ಉಮಾನಾಥ ಕೋಟ್ಯಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಮಾಜಿ ಸಚಿವ ಅಭಯಚಂದ್ರ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ,ಬಿಜೆಪಿ ಮುಖಂಡ ಸುದರ್ಶನ ಎಂ, ಅಮರಶ್ರೀ ಶೆಟ್ಟಿ ಸಹಿತ ಹಲವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ವಾಯ್ಸ್ ಆಫ್ ಆರಾಧನಾ ತಂಡದ ಮಕ್ಕಳಿಂದ ಹಾಗೂ ಸ್ಪೂರ್ತಿ ಶಾಲಾ ವಿಶೇಷ ಚೇತನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.



0 Comments