*2026ರ ಸರಸ್ವತಿ ಕನ್ನಡರತ್ನ ರಾಜ್ಯ ಪ್ರಶಸ್ತಿಗೆ ಡಾ.ರಾ.ಶಿರೂರು ಆಯ್ಕೆ: ಡಾ.ನಾಗೇಶ್ ಕಿಣಿ*

 *2026ರ ಸರಸ್ವತಿ ಕನ್ನಡರತ್ನ ರಾಜ್ಯ ಪ್ರಶಸ್ತಿಗೆ ಡಾ.ರಾ.ಶಿರೂರು ಆಯ್ಕೆ: ಡಾ.ನಾಗೇಶ್ ಕಿಣಿ*

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ

ಡಾ. ರಾಮಕೃಷ್ಣ ಶಿರೂರು ಅವರು ಸರಸ್ವತಿ ಕನ್ನಡ ರತ್ನ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ನಾಗೇಶ ಸಂಜೀವ ಕಿಣಿ ಬೆಂಗಳೂರು ಅವರುಪತ್ರಿಕೆಗೆ ತಿಳಿಸಿರುತ್ತಾರೆ. 

2026 ಏಪ್ರಿಲ್ 19 ರಂದು ದಾವಣಗೆರೆಯಲ್ಲಿ ಇರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿರುತ್ತಾರೆ. 

 

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 

1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,

 1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಅವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೂಡುಬಿದರೆ ತಾಲೂಕು ಘಟಕದ ಅಧ್ಯಕ್ಷರಾಗಿ ಮತ್ತು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ 

ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮುಂದುವರಿಯಲಿ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ನಾಗೇಶ ಸಂಜೀವ ಕಿಣಿ, ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀಪತಿ ರಾಘವೇಂದ್ರ ಶೆಣೈ ಮತ್ತು

ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

Post a Comment

0 Comments