ಜ್ಞಾನ ವಿಕಾಸ ಕಾಯ೯ಕ್ರಮದಡಿ ಶಿತಾ೯ಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ
ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರವನ್ನು ಶಿತಾ೯ಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಿಕಾ ಅವರು ಭಾಗವಹಿಸಿ ಮಾತನಾಡಿ ಮಹಿಳೆಯರು ಸ್ವ ಉದ್ಯೋಗ ಮಾಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದು ಹೇಳಿದರು. ಅಲಂಗಾರು ವಲಯದ ಜನ ಜಾಗೃತಿ ವೇದಿಕೆಯ ಸದಸ್ಯರಾದ ಲತಾ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತರಬೇತಿ ಶಿಕ್ಷಕಿ ಸುಕನ್ಯಾ, ಜ್ಞಾನ ವಿಕಾಸ ಸಮನ್ವಧಿಕಾರಿ ವಿದ್ಯಾ, ಸೇವಾಪ್ರತಿನಿಧಿ ಜಯಲಕ್ಷ್ಮಿ, ಹಾಗೂ ತರಬೇತಿ ಪಡೆಯಲಿರುವ 30 ಜನ ಸದಸ್ಯರು ಭಾಗವಹಿಸಿದ್ದರು. ಜಯಲಕ್ಷ್ಮಿ ಸ್ವಾಗತಿಸಿದರು. ವಿದ್ಯಾ ಆಚಾರ್ಯ ವಂದಿಸಿದರು.




0 Comments