ಪ್ರತಿಭಾ ಕಾರಂಜಿ ಮೂಡುಬಿದಿರೆಯ ವಿರಾಟ್ ಕೃಷ್ಣ ಪ್ರಥಮ

ಜಾಹೀರಾತು/Advertisment
ಜಾಹೀರಾತು/Advertisment

 ಪ್ರತಿಭಾ ಕಾರಂಜಿ ಮೂಡುಬಿದಿರೆಯ ವಿರಾಟ್ ಕೃಷ್ಣ ಪ್ರಥಮ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆಯ ಸೈಂಟ್ ಥಾಮಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಕವನವಾಚನದಲ್ಲಿ ಪ್ರಥಮ ಬಹುಮಾನ ಪಡೆದಿರುತ್ತಾರೆ. ಸಂಸ್ಕೃತ ಧಾರ್ಮಿಕ ಪಠಣ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.


          ಅವರು ಇತ್ತೀಚೆಗೆ ಧರ್ಮಸ್ಥಳದ‌ ಶ್ರೀಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಶಾಂತಿವನ ಟ್ರಸ್ಟ್ ಏರ್ಪಡಿಸಿದ ಕೃತಿಕೇಂದ್ರಿತ ಭಾಷಣ ಸ್ಪರ್ಧೆಯಲ್ಲಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Post a Comment

0 Comments