ಎಕ್ಸಲೆಂಟ್‌ನಿಂದ ಸ್ವಚ್ಛ ಗ್ರಾಮ ಸಂಕಲ್ಪ
ಮೂಡುಬಿದಿರೆ : ಪುರಸಭೆಯ ಸಹಯೋಗದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಸ್ವಚ್ಛ ಗ್ರಾಮ ಸಂಕಲ್ಪ ಕೈಗೊಂಡಿದ್ದು ವಿದ್ಯಾರ್ಥಿಗಳಲ್ಲಿ ನಿರಂತರ ಸ್ವಚ್ಛತಾ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾಲೇಜಿನ ಎನ್‌ಎಸ್‌ಎಸ್, ಎನ್‌ಸಿಸಿ, ರೇಂಜರ್ಸ್, ರೋವರ್‍ಸ್, ರೆಡ್‌ಕ್ರಾಸ್, ಸ್ಕೌಟ್ಸ್‌ಗೈಡ್ಸ್ ಸ್ವಯಂಸೇವಕರು ಬುಧವಾರ ಕೀರ್ತಿನಗರ ಸರ್ಕಲ್‌ನಿಂದ ಗಂಟಾಲ್‌ಕಟ್ಟೆಯವರೆಗೆ ಶ್ರಮದಾನದ ಮೂಲಕ ಸ್ವಚ್ಛತೆ ನಡೆಸಿದರು.
ಬಳಿಕ ಕಾಲೇಜಿನಲ್ಲಿ ನಡೆದ ಸ್ವಚ್ಛ ಗ್ರಾಮ ಸಂಕಲ್ಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗಂಟಾಲ್‌ಕಟ್ಟೆ ಚರ್ಚ್‌ನ ಧರ್ಮಗುರು ರೇ| ಫಾ. ರೊನಾಲ್ಡ್ ಪ್ರಕಾಶ್ ಡಿಸೋಜ ಮಾತನಾಡಿ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಮ್ಮ ಮನಸ್ಸು ಸ್ವಚ್ಛವಾಗಿರಬೇಕು. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಸ್ವಚ್ಛತೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಇಂಜಿನಿಯರ್ ಶಿಲ್ಪಾ ಸ್ವಚ್ಛತೆಯ ಪ್ರಾಮುಖ್ಯತೆಯನ್ನು ವಿವರಿಸಿದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.



0 Comments