ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ-ಬಿಜೆಪಿ ಗೆಲ್ಲಿಸಲು ಶಾಸಕ ಕೋಟ್ಯಾನ್, ಬಿಜೆಪಿ ಅಧ್ಯಕ್ಷ ಪುತ್ರನ್ ಮನವಿ
ನೂತನವಾಗಿ ರಚನೆಯಾಗಿರುವ ಬಜಪೆ ಪಟ್ಟಣ ಪಂಚಾಯತ್ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಬಿಡುಗಡೆಗೊಳಿಸಿದ್ದಾರೆ.
ಜನರನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳಿಗೆ ಶುಭ ಕೋರುತ್ತಾ ಪ್ರಚಂಡ ವಿಜಯವು ನಿಮಗೆ ಮತ್ತು ನಮ್ಮ ಪಕ್ಷಕ್ಕೆ ಲಭಿಸಲಿ ಹಾಗೂ ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಬೆಂಬಲಿಸಿ ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್ ರವರು ಮನವಿ ಮಾಡಿದ್ದಾರೆ.





0 Comments