ಯುವ ರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರ
* ವಿದ್ಯಾರ್ಥಿಗಳು ಸೇವಾ ಮನೋಭಾವದ ಗುಣವನ್ನು ಬೆಳೆಸಿಕೊಳ್ಳಬೇಕು
ಮೂಡುಬಿದಿರೆ: ರೆಡ್ ಕ್ರಾಸ್ ಸಂಸ್ಥೆಯು ಸಮಾಜ ಸೇವೆಗೆ ವಿಶ್ವದಾದ್ಯಂತ ಹೆಸರಾಗಿದೆ. ಈ ಸಂಸ್ಥೆಯ ಸದಸ್ಯರಾಗಿರುವ ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಪರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಅವರು ಹೇಳಿದರು.
ಅವರು ಮೂಡುಬಿದಿರೆಯ ಶ್ರೀ ಮಹಾವೀರ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಯುವ ರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಪ್ರೇಮ್‌ಚಂದ್ ಶೆಟ್ಟಿ, ಸಿ.ಹೆಚ್. ಗಫೂರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೆಫ್ಟಿನೆಂಟ್ ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಶ್ರೀಗೌರಿ, ಘಟಕದ ನಾಯಕಿ ಶ್ಲಾಘನಾ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.



0 Comments