ಹೊಸಂಗಡಿ : ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಜಾಹೀರಾತು/Advertisment
ಜಾಹೀರಾತು/Advertisment

 ಹೊಸಂಗಡಿ : ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಮೂಡುಬಿದಿರೆ : ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ.

ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ ( 42) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು.

ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.

ವಿದೇಶದಲ್ಲಿದ್ದ ಈತ ಇತ್ತೀಚೆಗಷ್ಟೇ ಊರಿಗೆ ಬಂದಿದ್ದು,ಅಲ್ಲಿಂದ ಹೊಸಂಗಡಿಯಲ್ಲಿರುವ ಹೆಂಡತಿ ಮನೆಗೆ ಬಂದಿದ್ದರೆನ್ನಲಾಗಿದೆ.

ಭಾನುವಾರ ಅದ್ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್ ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದು,ಅವರು ‘ಸರಿಮಾಡುವ,ಆತುರದ ನಿರ್ಧಾರ ಬೇಡ’ಎಂದು ಬುದ್ಧಿಮಾತು ಹೇಳಿದ್ದರೆನ್ನಲಾಗಿದೆ. ಆದರೆ ಆತ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೇರವಾಗಿ ನದಿ ಬಳಿ ಹೋಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

 ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ಧಾರೆ.

Post a Comment

0 Comments