ಕದ್ರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ವೈಭವ*

ಜಾಹೀರಾತು/Advertisment
ಜಾಹೀರಾತು/Advertisment
*ಕದ್ರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ವೈಭವ*

ಮಂಗಳೂರು: - ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಮಂಗಳವಾರ (20-1-2026) ವೈವಿಧ್ಯಮಯ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಜರಗಿತು. ಎಲ್ಲರ ಮೆಚ್ಚುಗೆ ಪಡೆಯಿತು. 
ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ, ಭಾರತೀಯ ಜೈನ್ ಮಿಲನ್ ಮಂಗಳೂರು ಅಧ್ಯಕ್ಷ ರತ್ನಾಕರ್ ಜೈನ್ , ಮಲ್ಲಿಕಾ ಕಲಾವೃಂದ ಮಂಗಳೂರು ಕಾರ್ಯಾಧ್ಯಕ್ಷ ಸುಧಾಕರ ರಾವ್ ಪೇಜಾವರ ಹಾಗೂ ಮೋಹನ ಕೊಪ್ಪಳ ಕದ್ರಿ, ಸನತ್ ಕುಮಾರ್ ಜೈನ್, ವಾಸುದೇವ ರಾವ್ ಕುಡುಪು, ಪೂರ್ಣಿಮಾ ರಾವ್ ಪೇಜಾವರ ಮತ್ತು ಮಕ್ಕಿಮನೆ ಕಲಾವೃಂದದ ಸುದೇಶ್ ಜೈನ್ ಮಕ್ಕಿಮನೆ, ರಿಮಾ ಜಗನ್ನಾಥ್ ಮಾರ್ನಮಿಕಟ್ಟೆ, ಅಶಿಶ್ ಅಂಚನ್, ಶ್ರೇಯಾ ಭಟ್ ಮೊದಲಾದವರು ಉಪಸ್ಥಿತರಿದ್ದು . ಎಲ್ಲ ಕಲಾವಿದರನ್ನು ಗೌವರವಿಸಿದರು. 
ಪ್ರತೀಕ್ಷಾ ಎ, ಗೌರವ್ ಜೈನ್ , ಸಾಂತಪ್ಪ ಯು, ಅಪೇಕ್ಷಾ ಎ ಮೊದಲಾದವರು ಸಹಕರಿಸಿದರು.

Post a Comment

0 Comments