ಜ. 22 ರಂದು ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ನೂತನ ಕಟ್ಟಡಕ್ಕೆ ಸ್ಥಳಾಂತರ

ಜಾಹೀರಾತು/Advertisment
ಜಾಹೀರಾತು/Advertisment
ಜ. 22 ರಂದು ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ನೂತನ ಕಟ್ಟಡಕ್ಕೆ ಸ್ಥಳಾಂತರ

ಮೂಡುಬಿದಿರೆ: ಕಳೆದ 11 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 12ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಬಸ್ ಸ್ಟ್ಯಾಂಡ್ ಬಳಿಯ ಕಟ್ಟಡದಿಂದ ಪುರಸಭಾ ಕಚೇರಿ ಎದುರಿನ ಫಾರ್ಚೂನ್ ನೀತಿ ಹೈಟ್ಸ್ ಕಟ್ಟಡದ ಸ್ವಂತ ಕಚೇರಿಗೆ ಸ್ಥಳಾಂತರಗೊಳ್ಳಲಿದ್ದು ನೂತನ ಕಚೇರಿಯ ಉದ್ಘಾಟನಾ ಸಮಾರಂಭವು ಜನವರಿ 22, ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ರಂಜಿತ್ ಪೂಜಾರಿ ತೋಡಾರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಜೈನಮಠದ ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯವರ್ಯ ಮಹಾ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಂಜಿತ್ ಪೂಜಾರಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಾ. ಎಂ. ಮೋಹನ ಆಳ್ವ, ಉದ್ಯಮಿಗಳಾದ ಕೆ. ಶ್ರೀಪತಿ ಭಟ್, ಶಶಿಧರ ಶೆಟ್ಟಿ ಬರೋಡಾ, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಕೆ. ಅಭಯಚಂದ್ರ ಜೈನ್ ಸೇರಿದಂತೆ ಸಾಮಾಜಿಕ ಮತ್ತು ಸಹಕಾರಿ ಕ್ಷೇತ್ರದ ಹಲವು ಗಣ್ಯರು ಭಾಗವಹಿಸಲಿದ್ದಾರೆ.


2014ರಲ್ಲಿ ಆರಂಭವಾದ ಈ ಸಂಘವು ಪ್ರಸ್ತುತ ಸುಮಾರು 11 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿದೆ. ಕೇವಲ ವ್ಯವಹಾರ ಮಾತ್ರವಲ್ಲದೆ, ಸಾಮಾಜಿಕ ಅಭಿವೃದ್ಧಿ ಕೆಲಸಗಳಿಗಾಗಿ (ಅನಾರೋಗ್ಯ, ವಿದ್ಯಾಭ್ಯಾಸ, ಮನೆ ನಿರ್ಮಾಣ) ಸುಮಾರು 14.13 ಲಕ್ಷ ರೂ.ಗಳಿಗೂ ಅಧಿಕ ನೆರವು ನೀಡಿದೆ. 2019-20ನೇ ಸಾಲಿನಲ್ಲಿ 'ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಸಹಕಾರಿ' ಪ್ರಶಸ್ತಿಯನ್ನೂ ಈ ಸಂಸ್ಥೆ ಮುಡಿಗೇರಿಸಿಕೊಂಡಿದೆ ಎಂದರು.

ಗ್ರಾಹಕರಿಗೆ ವಿಶೇಷ ಕೊಡುಗೆ:

ಸ್ವಂತ ಕಟ್ಟಡದ ಉದ್ಘಾಟನೆಯ ಪ್ರಯುಕ್ತ ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರವನ್ನು ಘೋಷಿಸಲಾಗಿದೆ. ಹಿರಿಯ ನಾಗರಿಕರು, ದಿವ್ಯಾಂಗರು, ಸೈನಿಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ 10.00% ಹಾಗೂ ಇತರರಿಗೆ 9.50% ಬಡ್ಡಿ ನೀಡಲಾಗುವುದು. ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಚಿನ್ನಾಭರಣ, ವಾಹನ ಹಾಗೂ ಗೃಹ ಸಾಲ ಸೌಲಭ್ಯಗಳು ಲಭ್ಯವಿವೆ ಎಂದು ರಂಜಿತ್ ಪೂಜಾರಿ ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ರಾಜಶೇಖರ ಮದ್ಯಸ್ಥ ನಿರ್ದೇಶಕರಾದ ಗೋಪಾಲ್ ಶೆಟ್ಟಿಗಾರ್, ರಾಜೇಂದ್ರ ಬಿ., ಸುರೇಶ್ ಪೂಜಾರಿ ಎಂ., ರಮೇಶ್ ಎಸ್. ಶೆಟ್ಟಿ, ಶರತ್ ಜೆ. ಶೆಟ್ಟಿ, ರವೀಂದ್ರ ಕರ್ಕೇರ, ರತ್ನಾಕರ ಪೂಜಾರಿ, ನಾಗೇಶ್ ನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.

Post a Comment

0 Comments