ಜ. 28ರಿಂದ ಫೆ.24ರವರೆಗೆ ಮೂಡುಬಿದಿರೆಯಲ್ಲಿ ಭಾರತೀಯ ಸೇನಾ ನೇಮಕಾತಿ ರ್ಯಾಲಿ
ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಯು ಜನವರಿ 28ರಿಂದ ಫೆಬ್ರವರಿ 14ರವರೆಗೆ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ.
ಈ ಬೃಹತ್ ರ‍್ಯಾಲಿಯ ಪೂರ್ವಸಿದ್ಧತೆಯ ಕುರಿತಾದ ಸಭೆಯು ಶನಿವಾರ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಸೇನಾ ನೇಮಕಾತಿ ನಿರ್ದೇಶಕ ಸೋನು ಮಹಾರಾಜನ್ ಅವರು, "ಈ ರ‍್ಯಾಲಿಯಲ್ಲಿ ಅಂದಾಜು 15ರಿಂದ 20 ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಭ್ಯರ್ಥಿಗಳಿಗೆ ಉಳಿದುಕೊಳ್ಳಲು ವಸತಿ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ" ಮನವಿ ಮಾಡಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, "ನಮ್ಮ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇನೆಗೆ ಆಯ್ಕೆಯಾಗಬೇಕು. ದೇಶಸೇವೆಯ ಈ ಪವಿತ್ರ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು," ಎಂದು ಸೂಚನೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಜಿಲ್ಲಾ ಕ್ರೀಡಾ ಇಲಾಖೆ ನಿರ್ದೇಶಕ ಪ್ರದೀಪ್ ಡಿಸೋಜ ಜಿಲ್ಲಾ ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ನಿರ್ದೇಶಕ ಪ್ರದೀಪ್ ಡಿಸೋಜ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಅರಣ್ಯಾಧಿಕಾರಿ ಕಿಶೋರ್ ಕುಮಾರ್, ಮೆಸ್ಕಾಂ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮೋಹನ್ ಟಿ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು



0 Comments