ಮಾಜಿ ಯೋಧರಿಗೆ ಟೋಲ್‌ಗೇಟ್‌ನಲ್ಲಿ ಅವಮಾನ: ಸೂಕ್ತ ಕ್ರಮಕ್ಕೆ ಸಂಸದ ಕೋಟ ಸೂಚನೆ

ಜಾಹೀರಾತು/Advertisment
ಜಾಹೀರಾತು/Advertisment
ಮಾಜಿ ಯೋಧರಿಗೆ ಟೋಲ್‌ಗೇಟ್‌ನಲ್ಲಿ ಅವಮಾನ: ಸೂಕ್ತ ಕ್ರಮಕ್ಕೆ ಸಂಸದ ಕೋಟ ಸೂಚನೆ

ನಿವೃತ್ತ ಸೇನಾ ಕಮಾಂಡರ್ ಶ್ಯಾಮರಾಜ್ ರವರಿಗೆ ಸಾಸ್ತಾನದ ಟೋಲ್ ಗೇಟ್‌ನಲ್ಲಿ ಮಾಡಿರುವ ಅಪಮಾನಕಾರಿ ವಿದ್ಯಮಾನ ನೋವಿನ ಸಂಗತಿ. ಈ ಬಗ್ಗೆ ತಕ್ಷಣ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಸೂಚನೆ ನೀಡಿದ್ದಾರೆ.
ಮಾಜಿ ಯೋಧರಿಗೆ ಸಾಸ್ತಾನ ಟೋಲ್‌ನಲ್ಲಿ ವಿನಾಯಿತಿ ನೀಡದೆ ಅವಮಾನ ಎಸಗಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸ್ಪಂದಿಸಿದ ಸಂಸದ ಕೋಟ ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇನ್ನು ಮುಂದೆ ಇಂತಹಾ ಘಟನೆಗಳು ಮರುಕಳಿಸದಂತೆ ರಾಷ್ಟ್ರಸೇವಕ ಸೈನಿಕರಿಗೆ ಅಪಮಾನ ಆಗದಂತೆ ಎಚ್ಚರ ವಹಿಸುವುದು ನಮ್ಮೆಲ್ಲರ ಜವಬ್ದಾರಿ. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ‌ ಕೈಗೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

Post a Comment

0 Comments