ಮಹಾ ಡಿಸಿಎಂ ಪವಾರ್ ನಿಧನ:ಮಾಜಿ ಸಚಿವ ಅಭಯಚಂದ್ರ ಜೈನ್ ಸಂತಾಪ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆ : ಹೆಲಿಕಾಪ್ಟರ್ ದುರಂತದಲ್ಲಿ ಬುಧವಾರ ನಿಧನ ಹೊಂದಿದ ಮಹಾರಾಷ್ಟ್ರದ ಪುಣೆ ಸಮೀಪದ ಬಾರಾಮತಿ ಕ್ಷೇತ್ರದ ಸಜ್ಜನ ರಾಜಕಾರಣಿಯಾಗಿದ್ದ ಅಜಿತ್ ಪವಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮೇಲೆ ಅಪಾರ ಅಭಿಮಾನವಿತ್ತು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.


ಬಾರಾಮತಿ ಕ್ಷೇತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದ ಕ್ಷೇತ್ರವಾಗಿದ್ದು, ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಜೈನ್ ಸ್ಮರಿಸಿದರು.
2004ರಲ್ಲಿ ತಾವು ಕರ್ನಾಟಕ ಸರ್ಕಾರದ ಮುಖ್ಯ ಸಚೇತರಾಗಿದ್ದ ವೇಳೆ ಬಾಂಬೆಯಲ್ಲಿ ನಡೆದ ಸಮ್ಮೇಳನಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ಲಭಿಸಿತ್ತು ಎಂದು ನೆನಪಿಸಿಕೊಂಡ ಅವರು, .
ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿ ಮೃತ ಆತ್ಮಕ್ಕೆ ಶಾಂತಿ ಕೋರಿದರು.

Post a Comment

0 Comments