ನೆಲ್ಲಿಕಾರಿನ ಭಾಷಾ ಸಾಬ್‌ಗೆ ನಾಲ್ಕು ಚಿನ್ನ, ರಾಜ್ಯಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಷಿಯನ್ ಭಾಷಾ ಸಾಬ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.
45 ವರ್ಷದೊಳಗಿನ ಪುರುಷರ ವಿಭಾಗದಲ್ಲಿ ಭಾಗವಹಿಸಿದ ಅವರು 50 ಮೀಟರ್, 100 ಮೀಟರ್, 200 ಮೀಟರ್ ಹಾಗೂ 4×100 ಮೀಟರ್ ಬ್ಯಾಕ್ ಸ್ಟ್ರೋಕ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ನಾಲ್ಕು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆ–ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.
ಭಾಷಾ ಸಾಬ್ ಅವರು ಸತತ 8 ವರ್ಷಗಳಿಂದ ಸಾಧನೆ ಮಾಡುತ್ತಿದ್ದು, ರೇಷ್ಮೆ ಇಲಾಖೆಯ ಅಧಿಕಾರಿ ಬಿ.ಕೆ ನಾಯ್ಕ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.


0 Comments