ಕಡಂದಲೆ ಶಾಲೆಯ ವಿದ್ಯಾಥಿ೯ ಚೆನ್ನಪ್ಪ ತಬ್ಬಣ್ಣ ಗೊಂದಿ ಕರ್ನಾಟಕ ರಾಜ್ಯ ಸಬ್ ಜೂನಿಯರ್ ಕಬಡ್ಡಿ
ಮೂಡುಬಿದಿರೆ: ಇಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚೆನ್ನಪ್ಪ ತಬ್ಬಣ್ಣ ಗೊಂದಿ, ಕರ್ನಾಟಕ ರಾಜ್ಯ ಸಬ್ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ 'ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ' ವತಿಯಿಂದ ನಡೆದ ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಚೆನ್ನಪ್ಪ, ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ರಾಜ್ಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಆಯ್ಕೆಯಾಗಿರುವ ಚೆನ್ನಪ್ಪ ಅವರು ಮುಂದಿನ ತಿಂಗಳು ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿಯ ಈ ಮಹೋನ್ನತ ಸಾಧನೆಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.



0 Comments