ಕಾರುಗಳ ಮುಖಾಮುಖಿ ಢಿಕ್ಕಿ :ವಿದ್ಯಾರ್ಥಿನಿಗೆ ಗಾಯ
ಮೂಡುಬಿದಿರೆ: ಗುರುವಾರ ಮಧ್ಯಾಹ್ನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಿದ್ಯಾರ್ಥಿನಿಯೊಬ್ಬರು ಗಾಯಗೊಂಡ ಘಟನೆ
ನಡೆದಿದೆ.
ಕಿನ್ನಿಗೋಳಿಯಿಂದ ಮೂಡುಬಿದಿರೆ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ಹಾಗೂ ಉಜಿರೆಯಿಂದ ಕಟೀಲು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಉಜಿರೆ ಮೂಲದ ವಿದ್ಯಾರ್ಥಿನಿ ಅಶ್ವಿತಾ ಎಂಬವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎರಡೂ ಕಾರಿನಲ್ಲಿದ್ದ ಇತರ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯಿಂದ ಎದ್ದ ವಿಪರೀತ ಧೂಳು ಮತ್ತು ದಟ್ಟವಾದ ಹೊಗೆಯಿಂದಾಗಿ ರಸ್ತೆ ಸರಿಯಾಗಿ ಕಾಣಿಸದ ಕಾರಣ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ದಾರಿ ಕಾಣದೆ ಚಾಲಕರು ನಿಯಂತ್ರಣ ತಪ್ಪಿದ್ದೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ.



0 Comments