ಮೂಡುಬಿದಿರೆ : ಇಲ್ಲಿನ ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭವು ಫೆ.28 ರಂದು ಸಂಜೆ 5-30 ಕ್ಕೆ ನೆತ್ತೋಡಿ- ಮಾರೂರಿನ ಎ.ಪಿ.ಗಾರ್ಡನ್ ನಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಅಶ್ವಿನ್ ಜೊಸ್ಸಿ ಪಿರೇರಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾಯ೯ಕ್ರಮದಲ್ಲಿ
ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಲೆಟ್ ಪಿಂಟೊ ಅವರು ಸಹಾಯಹಸ್ತ ವಿತರಣೆ ಮಾಡಲಿದ್ದಾರೆ.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್,ಮಂಗಳೂರು ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ, ತಾಕೊಡೆ ಪವಿತ್ರ ಶಿಲುಬೆಯ ದೇವಾಲಯದ ಧರ್ಮಗುರುಗಳಾದ ರೆ.ಫಾ.ರೋಹನ್ ಲೋಬೋ, ಹನ್ನೆರಡುಕವಲು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಸದಾಶಿವ ಭಟ್ ಹಾಗೂ ಪುಚ್ಚಮೊಗರು ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ಹುಸೈನ್ ಸಖಾಫಿ ಅಲ್ ಫುರ್ಖಾನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಉಪಾಧ್ಯಕ್ಷ ಎಡ್ವಿನ್ ಡಿಸೋಜ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫ್ರಾನ್ಸಿಸ್ ಮೆಂಡೋನ್ಸ ಮತ್ತು ಸೇವಾ ಸಹಕಾರಿ ಸಂಘದ ನಿದೇ೯ಶಕರುಗಳು ಉಪಸ್ಥಿತರಿರುವರು.


0 Comments