*ಶಾಲಾ ಶಿಕ್ಷಣ ಇಲಾಖೆ ನೌಕರ ಸಂಘದ ಅಧ್ಯಕ್ಷರಾಗಿ ನಾಗರತ್ನ ಶಿರೂರು ಆಯ್ಕೆ*

ಜಾಹೀರಾತು/Advertisment
ಜಾಹೀರಾತು/Advertisment
*ಶಾಲಾ ಶಿಕ್ಷಣ ಇಲಾಖೆ ನೌಕರ ಸಂಘದ ಅಧ್ಯಕ್ಷರಾಗಿ ನಾಗರತ್ನ ಶಿರೂರು ಆಯ್ಕೆ*
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರು ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ನಾಗರತ್ನ ಶಿರೂರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಶ್ರೀಮತಿ ಮಹೇಶ್ವರಿ ಅವರು ತಾಲೂಕು ಕಾರ್ಯದರ್ಶಿಯಾಗಿ ಮತ್ತು ಶ್ರೀ ಮಾಲತೇಶ ಅವರು ಕೋಶಾಧಿಕಾರಿಯಾಗಿ ಆಯ್ಕೆಯಾಗಿರುತ್ತಾರೆ. 
ಗೌರವಾಧ್ಯಕ್ಷರಾಗಿ ಶ್ರೀ ನವೀನ್ ಅಂಬೂರಿ, ಜಿಲ್ಲಾ ಪರಿಷತ್ ಸದಸ್ಯರಾಗಿ ಶ್ರೀ ಶರಣಯ್ಯ, ಹಿರಿಯ ಉಪಾಧ್ಯಕ್ಷರಾಗಿ ಶ್ರೀ ನವೀನ್ ಎಂ. ಹೆಗ್ಡೆ ಉಪಾಧ್ಯಕ್ಷರಾಗಿ, ಶ್ರೀ ಭರತ್ ಕುಮಾರ್ ಎಸ್., ಶ್ರೀಮತಿ ರೇಣುಕಾ ಬಿ. ಅವರನ್ನು ಆಯ್ಕೆ ಮಾಡಲಾಯಿತು. ಜಂಟಿ ಕಾರ್ಯದರ್ಶಿಗಳಾಗಿ ಶ್ರೀಮತಿ ಹೆಲೆನ್ ಡಿಸೋಜಾ, ಶ್ರೀಮತಿ ವಿನುತ ಎಸ್., ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ರಾಘವೇಂದ್ರ ಪೈ, ಶ್ರೀಮತಿ ಪ್ಲೇವಿ ಡಿಸೋಜ, ಶ್ರೀಮತಿ ಪ್ರೇಮ ಪಿ., ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀ ಬಸವರಾಜ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಯೋಗಿತಾ ಎನ್., ಆಂತರಿಕ ಲೆಕ್ಕಪರಿಶೋಧಕರಾಗಿ ಶ್ರೀಮತಿ ಕಸ್ತೂರಿ ಎಚ್. ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಶ್ರೀ ಪ್ರೇಮನಾಥ ಶೆಟ್ಟಿ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಮೋಹನ ಕೊನವಳ್ಳಿ ಅವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಮೂಡುಬಿದಿರೆ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಡಾ. ದೊರೆಸ್ವಾಮಿ ಕೆ.ಎನ್. ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

Post a Comment

0 Comments