ಮಾ. 28 : "ಆಳ್ವಾಸ್ ಟ್ರೆಡೀಶನಲ್ ಡೇ" ಗೆಚಲನಚಿತ್ರ ನಟ ಶಿವರಾಜ್ ಕುಮಾರ್ ದಂಪತಿ

ಜಾಹೀರಾತು/Advertisment
ಜಾಹೀರಾತು/Advertisment
ಮಾ. 28 : "ಆಳ್ವಾಸ್ ಟ್ರೆಡೀಶನಲ್ ಡೇ" ಗೆ
ಚಲನಚಿತ್ರ ನಟ ಶಿವರಾಜ್ ಕುಮಾರ್ ದಂಪತಿ 
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ವೈವಿಧ್ಯಮಯ ಸಾಂಸ್ಕೃತಿಕ ಹಬ್ಬ ' ಆಳ್ವಾಸ್ ಟ್ರೆಡೀಶನಲ್ ಡೇ ಇಂದು ಬೆಳಿಗ್ಗೆ 9.15ಕ್ಕೆ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಜರುಗಲಿದೆ.
ಸಂಪ್ರದಾಯ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಸಾಕ್ಷಿಯಾಗಲಿರುವ ಈ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ನಟ, ಡಾ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments