ಮೂಡುಬಿದಿರೆ: ನಿಂತಿದ್ದ ಲಾರಿ ಗೆ ಬೈಕೊಂದು ಅತೀ ವೇಗದಿಂದ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಪುರಸಭಾ ವ್ಯಾಪ್ತಿಯ ಕೆಇಬಿ ಸಮೀಪದಲ್ಲಿ ಮಂಗಳವಾರ ಸಂಜೆ ವೇಳೆ ನಡೆದಿದೆ.
ಮೂಡುಬಿದಿರೆ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಯಾದ ಪ್ರೇಮಾ ಮತ್ತು ಅವರ ಮಗ ಸೀನ ಯಾನೆ ಶ್ರೀನಿವಾಸ ಶೆಟ್ಟಿ ಸಾವನ್ನಪ್ಪಿದ ದುರ್ದೈವಿಗಳು.
ಇವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಇವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಸೀನ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


0 Comments