ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲದ ವ್ಯಾಪ್ತಿಗೆ ಒಳಪಡುವ ಪುತ್ತಿಗೆ ಮಹಾಶಕ್ತಿಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀ ನಾಗೇಶ್ ಅಮೀನ್ ಇರುವೈಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಇವರು, ಮುಂಬರುವ ದಿನಗಳಲ್ಲಿ ಪುತ್ತಿಗೆ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ಅಮೀನ್ ಅವರಿಗೆ ಮುಲ್ಕಿ-ಮೂಡುಬಿದಿರೆ ಮಂಡಲದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


0 Comments