ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರ 135ನೇ ಜನ್ಮ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರ 135ನೇ ಜನ್ಮ ದಿನಾಚರಣೆ


ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ- ಮೂಡುಬಿದಿರೆ ಮಂಡಲದ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸುವ ಮೂಲಕ 135 ನೇ ಜನ್ಮ ದಿನಾಚರಣೆಯನ್ನು ವಿದ್ಯಾಗಿರಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.


ಹಿರಿಯ ಬಿಜೆಪಿ ಮುಖಂಡ, ನ್ಯಾಯವಾದಿ ಎಂ. ಬಾಹುಬಲಿ ಪ್ರಸಾದ್ ಅವರು ಮಾತನಾಡಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿ ಕಾರ್ಯನಿರ್ವಹಿಸಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು. ನಮ್ಮ ಸಂವಿಧಾನದಲ್ಲಿ ಜನರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಸವಿವರವಾಗಿ ನಮೂದಿಸಿದರಿಂದ ದೇಶದಲ್ಲಿ ಯಾವುದೇ ದಂಗೆ - ಅಶಾಂತಿ ಇಲ್ಲದೆ ಸರಕಾರ ನಡೆಸಲು ಪೂರಕವಾಗಿರುತ್ತದೆ. ಬಿಜೆಪಿ ಹಿರಿಯ ನಾಯಕ ಕೆ.ಆರ್ ಪಂಡಿತ್ ಅವರು ಡಾ.ತ ಬಿ.ಆರ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಉಲ್ಲೇಖಿಸಿದರು.


ಅಗಲಿರುವ ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ರಾಮಚಂದ್ರ ಬೈಕಂಪಾಡಿ ಅವರಿಗೆ ಈ ಸಂದರ್ಭದಲ್ಲಿ   ಶ್ರದ್ಧಾಂಜಲಿ ಅರ್ಪಿಸಲಾಯಿತು.


ಮೂಡುಬಿದಿರೆ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಲಕ್ಷ್ಮಣ್ ಪೂಜಾರಿ, ಮೇಘನಾಥ್ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷರಾದ ನಾಗರಾಜ್ ಪೂಜಾರಿ ಒಂಟಿಕಟ್ಟೆ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿಯಾದ ಅಧ್ಯಕ್ಷರಾದ ಅಣ್ಣಪ್ಪ, ಪ್ರಮುಖರಾದ ಪ್ರಸಾದ್ ಭಂಡಾರಿ, ದಿನೇಶ್ ಕುಮಾರ್, ವಿಠಲ ದೇವಾಡಿಗ, ಶಕ್ತಿ ಕೇಂದ್ರದ ಪ್ರಮುಖರಾದ ಕರುಣಾಕರ್ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments