ಆತ್ಮಶಕ್ತಿ ಸಹಕಾರಿ ಸಂಘದ 35ನೇ ಶಾಖೆ ಮೂಡುಬಿದಿರೆಯಲ್ಲಿ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment
ಆತ್ಮಶಕ್ತಿ ಸಹಕಾರಿ ಸಂಘದ 35ನೇ ಶಾಖೆ ಮೂಡುಬಿದಿರೆಯಲ್ಲಿ ಉದ್ಘಾಟನೆ
 ಮೂಡುಬಿದಿರೆ: ಮಂಗಳೂರಿನ ಆತ್ಮಶಕ್ತಿ ಸಹಕಾರಿ ಸಂಘದ 35ನೇ ಶಾಖೆಯು ಭಾನುವಾರ ಮೂಡುಬಿದಿರೆ ಅಂಚೆ ಕಚೇರಿ ಎದುರಿನ ರಾಮಯ್ಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. 

  ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಅವರು 35ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಆರ್ಥಿಕ ವ್ಯವಹಾರದೊಂದಿಗೆ ಸಾಮಾಜಿಕ ಚಿಂತನೆಯುಳ್ಳ ಯೋಜನೆಗಳನ್ನು ಜಾರಿಗೆ ತಂದು, ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಆತ್ಮಶಕ್ತಿಯ ಹೆಚ್ಚುಗಾರಿಕೆ. ವಿಶೇಷವಾಗಿ ಮಹಿಳಾ ಸನಲೀಕರಣ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಸಹಕಾರಿಯ ಉತ್ತಮ ನಡೆ. ಜನರು ವ್ಯವಹಾರದಲ್ಲಿ ವ್ಯಾಜ್ಯಗಳಿಂದ ದೂರವಿರಬೇಕು. ಈಗಾಗಲೇ ಸಹಕಾರಿ ಕ್ಷೇತ್ರದಲ್ಲಿ ತನ್ನದೆ ಛಾಪು ಮೂಡಿಸಿರುವ ಆತ್ಮಶಕ್ತಿ ಸಹಕಾರಿಯು ಕೆಲವೇ ವರ್ಷಗಳಲ್ಲಿ 100ನೇ ಶಾಖೆಯನ್ನು ಹೊಂದುವಂತ್ತಾಗಲಿ ಎಂದು ಶುಭ ಹಾರೈಸಿದರು. 
ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಖೆಯ ಉದ್ಘಾಟನೆಯ ಪ್ರಯುಕ್ತ ವಿಶೇಷ ಯೋಜನೆಗಳು ಮತ್ತು ಸೌಲಭ್ಯಗಳು ನಮ್ಮ ಗ್ರಾಹಕರಿಗೆ ನೀಡುತ್ತಿದ್ದೇವೆ. 500 ದಿನಗಳ ಠೇವಣಿಗಳಿಗೆ ಶೇ.10 ವಿಶೇಷ ಬಡ್ಡಿ, 1000 ದಿನಗಳ ಠೇವಣಿಗಳಿಗೆ ಶೇ.10.50 ಬಡ್ಡಿದರ ನೀಡಲಾಗುತ್ತಿದೆ. ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ
ರೂ.12,000 ವರೆಗೆ ಸದಸ್ಯರಿಗೆ ಸೇವಾ ಶುಲ್ಕವಿಲ್ಲದೆ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಸಂಘದ ಎಲ್ಲಾ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಇ-ಮುದ್ರಾಂಕ ಸೇವೆ, ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ವಿವಿಧ ಜನರಲ್ ಇನ್ಸುರೆನ್ಸ್ ಕಂಪನಿಗಳ ವಿಮಾ ಸೇವೆಗಳೂ ಲಭ್ಯವಿರುತ್ತವೆ ಎಂದರು. 
ಐ. ತಾರಾನಾಥ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100 ಅಂಕ ಗಳಿಸಿದ ದಿಶಾ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್ ಭಾಗವಹಿಸಿ ಶುಭ ಹಾರೈಸಿದರು. 
ನಿರಖು ಠೇವಣಿಯನ್ನು ಬೆಳುವಾಯಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಭದ್ರತಾ ಕೋಶ ಉದ್ಘಾಟಿಸಿದರು. ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಈ ಬ್ಯಾಂಕಿAಗ್ ಸೇವೆಗೆ ಚಾಲನೆ ನೀಡಿದರು. 
ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ., ಆತ್ಮಶಕ್ತಿ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ ಪಿ., ನಿರ್ದೇಶಕರಾದ ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ ಎನ್., ರಾಮನಾಥ ಸನಿಲ್, ಮುದ್ದು ಮೂಡುಬೆಳ್ಳೆ, ದಿವಾಕರ ಬಿ.ಪಿ., ಗೋಪಾಲ್ ಎನ್., ಚಂದ್ರಾವತಿ, ಉಮಾವತಿ, ಮೂಡುಬಿದಿರೆ ಶಾಖೆಯ ಪ್ರಬಂಧಕಿ ರವಿಕಲಾ ಮತ್ತಿತರರಿದ್ದರು. 
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯಾ ವಿಜಯ್ ಸ್ವಾಗತಿಸಿದರು. ಧನಲಕ್ಷ್ಮಿ ಸನ್ಮಾನಪತ್ರ ವಾಚಿಸಿದರು. ವಿಶ್ವನಾಥ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments