ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ದಾಖಲೆಯ 483 ಕೋಟಿ ರೂ. ವ್ಯವಹಾರ : ಎಚ್ ವಸಂತ್ ಬೆರ್ನಾರ್ಡ್

ಜಾಹೀರಾತು/Advertisment
ಜಾಹೀರಾತು/Advertisment
ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ದಾಖಲೆಯ 483 ಕೋಟಿ ರೂ. ವ್ಯವಹಾರ : ಎಚ್ ವಸಂತ್ ಬೆರ್ನಾರ್ಡ್
ಮೂಡುಬಿದಿರೆ : ಗ್ರಾಹಕರ ಸಹಕಾರ, ಸದಸ್ಯರ ಪ್ರೋತ್ಸಾಹ, ಆಡಳಿತ ವರ್ಗದವರ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ಕಾರ್ಯಶ್ರಮತೆಯಿಂದಾಗಿ 2025-26ನೇ ಸಾಲಿನಲ್ಲಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ 483 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ಸೊಸೈಟಿ ಅಧ್ಯಕ್ಷ ವಸಂತ್ ಬರ್ನಾರ್ಡ್‌ ಹೇಳಿದ್ದಾರೆ.  

ಅವರು ಶನಿವಾರ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ ಕೇಂದ್ರ ಕಚೇರಿಯಲ್ಲಿ ನಡೆದ ಅವಲೋಕನ ಸಭೆಯಲ್ಲಿ ಮಾಹಿತಿ ನೀಡಿದರು.

ಮಾಜಿ ಸಚಿವರಾದ ಕೆ. ಅಭಯ ಚಂದ್ರ ಜೈನ್ ಅವರ ಮಾರ್ಗದರ್ಶನ ಹಾಗೂ ಸಹಕಾರಿ ಭೀಷ್ಮ ದಿವಂಗತ ಎಚ್. ನಾರಾಯಣ ಸನಿಲ್ ಮತ್ತು ದಿವಂಗತ ಪಂಜದಗುತ್ತು ಶಾಂತರಾಮ ಶೆಟ್ಟಿ ಅವರ ಪ್ರೇರಣಾ ಶಕ್ತಿಯಿಂದ 2021ರಲ್ಲಿ ಪ್ರಾರಂಭವಾದ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯು, ವರದಿ ಸಾಲಿನಲ್ಲಿ 483 ಕೋಟಿ ರೂ. ವ್ಯವಹಾರವನ್ನು ದಾಖಲಿಸಿದೆ. 

ಕಳೆದ ಸಾಲಿನ ವ್ಯವಹಾರವನ್ನು ತುಲನೆ ಮಾಡಿದರೇ ಶೇ. 72.86 ಏರಿಕೆಯನ್ನು ಕಂಡಿದೆ. ಪ್ರಸ್ತುತ 38.32 ಕೋಟಿ ರೂ. ಠೇವಣಿ, 32.48 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ , ರೂ.76.57 ಲಕ್ಷ ಪಾಲು ಬಂಡವಾಳ, ರೂ.90.50 ಲಕ್ಷ ನಿಧಿಗಳು, ರೂ.40 ಕೋಟಿ ದುಡಿಯುವ ಬಂಡವಾಳ ಹೊಂದಿರುತ್ತದೆ ಎಂದರು.

 ಸಂಸ್ಥೆಯು 2025-26ನೇ ಸಾಲಿನಲ್ಲಿ ಉತ್ತಮ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಉತ್ತಮ ರೀತಿಯ ಪಾಲು ಮುನಾಫೆಯನ್ನು ಹಂಚುವ ಗುರಿ ಹೊಂದಿದೆ ಎಂದು ತಿಳಿಸಿದರು.

ಹಳೆಯಂಗಡಿ, ಪಡುಬಿದ್ರೆ, ಕಿನ್ನಿಗೋಳಿ ಮತ್ತು ಮೂಡಬಿದ್ರೆಯಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ಸೊಸೈಟಿಯು ವರದಿ ವರ್ಷದಲ್ಲಿ ಕೂಡ ಹೊಸ ಶಾಖೆ ಒಂದನ್ನು ತೆರೆಯುವ ಗುರಿ ಇಟ್ಟುಕೊಂಡಿದೆ ಎಂದು ತಿಳಿಸಿದರು.

 ಅವಲೋಕನ ಸಭೆಯಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ, ಲೆಕ್ಕಿಗರಾದ ಲೋಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

Post a Comment

0 Comments