ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಸ್ವಾವಲಂಬನೆ ಕ್ಷೀಣ- ಡಾ.ಎಂ ಮೋಹನ ಆಳ್ವ.

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಕೃಷಿಯಲ್ಲಿ ಅತಿಯಾದ ರಾಸಾಯನಿಕ  ಬಳಕೆಯಿಂದ ಸ್ವಾವಲಂಬನೆ ಕ್ಷೀಣ- ಡಾ.ಎಂ ಮೋಹನ ಆಳ್ವ.

ಮೂಡುಬಿದಿರೆ:  ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಎಸ್‌ಕೆಡಿಆರ್‌ಡಿಪಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ `ಸುಸ್ಥಿರ ಕೃಷಿಗಾಗಿ ಸಮಗ್ರ ಕೃಷಿ ಪದ್ಧತಿ' ಕುರಿತ ವಿಚಾರ ಸಂಕಿರಣವು ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆಯಿತು. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ 

ಇಂದು ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ರಾಸಾಯನಿಕ ಪದಾರ್ಥಗಳನ್ನು ಅತಿಯಾಗಿ ಬಳಕೆ ಮಾಡುತ್ತಿದ್ದು ಇದರಿಂದ ರೈತರನ್ನು ಸ್ವಾವಲಂಬನೆಯಿಂದ ದೂರ ಮಾಡಿ ಪರಾವಲಂಬಿತೆಯತ್ತ ಕೊಂಡೊಯ್ಯುತ್ತಿದ್ದು, ಇದರಿಂದ ಮಾನವ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಹಾನಿ ಉಂಟಾಗುತ್ತಿದೆ ಕೃಷಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.


ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಕಾಸರಗೋಡು ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯ ನಿರ್ದೇಶಕ ಬಾಲಚಂದ್ರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಮಾತನಾಡಿ, ತೆಂಗು ಮತ್ತು ಅಡಿಕೆ ಮರಗಳ ಗರಿಗಳಿಂದ ತಯಾರಿಸುವ ಸಾವಯವ ಗೊಬ್ಬರ ಬಳಸುವುದರಿಂದ ಉತ್ತಮ ಇಳುವರಿ ಪಡೆಯಬಹುದು. ಇದರಿಂದ ಮಣ್ಣಿನ ಪೋಷಕಾಂಶ ಹೆಚ್ಚುವುದರ ಜೊತೆಗೆ ಪರಿಸರ ಮಾಲಿನ್ಯವೂ ಕಡಿಮೆಯಾಗುತ್ತದೆ. ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ತಗ್ಗಿಸಲು ಇದು ಪರಿಣಾಮಕಾರಿ ಮಾರ್ಗ ಎಂದರು. 

ಆಳ್ವಾಸ್ ಕಾಲೇಜಿನ ವ್ಯವಸ್ಥಾಪನ ಟ್ರಸ್ಟಿ ವಿವೇಕ್ ಆಳ್ವ, ಎಸ್‌ಕೆಡಿಆರ್‌ಡಿಪಿ ಬಿಸಿ ಟ್ರಸ್ಟ್ನ ಸಿಇಒ ಅನಿಲ್ ಕುಮಾರ್ ಎಸ್.ಎಸ್., ಮಂಗಳೂರು ಕೃಷಿ ಉತ್ಪಾದಕರ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಸೋನ್ಸ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ್ ಕುಮಾರ್, ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ರೈತ ಮುಖಂಡ ಲಿಯೋ ವಾಲ್ಟರ್ ನಝರತ್ ಮತ್ತಿತರರಿದ್ದರು. 

ಆಳ್ವಾಸ್ ಕೃಷಿ ವಿಜ್ಞಾನ ಕಾಲೇಜಿನ ಡೀನ್ ಎಸ್. ಎನ್. ವಾಸುದೇವ ಸ್ವಾಗತಿಸಿದರು.

Post a Comment

0 Comments

Advertisement