ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಡುಬಿದಿರೆ ತಾಲೂಕು ತಾಲೂಕು ಅಧ್ಯಕ್ಷರಾಗಿ ವಾಸುದೇವ ನಾಯಕ್ ಮುಂದಿನ 2 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ನಿರ್ಗಮನ ಅಧ್ಯಕ್ಷರಾದ ಸುಭಾಸ್ಚಂದ್ರ ಚೌಟ, ದ.ಕ 1 ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ, ಎಲ್ಲಾ ವಲಯಗಳ ಜನಜಾಗೃತಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಗಣೇಶ್, ಮೂಡುಬಿದಿರೆ ಯೋಜನಾ ವ್ಯಾಪ್ತಿಯ ಯೋಜನಾಧಿಕಾರಿ ಧನಂಜಯ ಬಿ. ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು ಉಪಸ್ಥಿತರಿದ್ದರು.


0 Comments